ಸ್ಟೀರಿಯೋ ಸಿಸ್ಟಮ್ ಕೊಳ್ಳಲು ಅಂಗಡಿಗೆ ಹೋಗಿದ್ದೀರಾ? ಅಂಗಡಿಯಾತ ಕೇಳುವ ಪ್ರಶ್ನೆ “ನಿಮಗೆ ಎಷ್ಟು ವಾಟ್‌ನ ಸಿಸ್ಟಮ್ ಬೇಕು?”. ಅಥವಾ ಆತನೇ ಒಂದೊಂದಾಗಿ ತನ್ನಲ್ಲಿರುವ ಸ್ಟೀರಿಯೋಗಳನ್ನು ತೋರಿಸುತ್ತಾ ಹೋಗುತ್ತಾನೆ. ಪ್ರತಿ ಸ್ಟೀರಿಯೋವನ್ನು ತೋರಿಸುವಾಗಲೂ ಮರೆಯದೆ ಹೇಳುವ ಮಾತು ಅದು ಎಷ್ಟು ವಾಟ್‌ನದು ಎಂದು. “ಸಾರ್, ಇದು 1000 ವಾಟ್, ಇದು 2000 ವಾಟ್,…” ಹೀಗೆ ಗುಣಗಾನ ಸಾಗುತ್ತಿರುತ್ತದೆ. ಹೆಚ್ಚಿನ ಗ್ರಾಹಕರೂ ಸ್ಟೀರಿಯೋ ಕೊಳ್ಳುವಾಗ ಮುಖ್ಯವಾಗಿ ಗಮನಿಸುವುದು ಅದು ಎಷ್ಟು ವಾಟ್‌ನದು ಎಂದು. ಈ ವಾಟ್ ಎಂದರೆ ಏನು? ವಾಟ್ […]