ಮನೆಯಲ್ಲೇ ರಕ್ತ ಪರೀಕ್ಷೆ ಮಾಡಿರಿ ಎಪ್ರಿಲ್ ೨೦೨೦ ರಿಂದ ತುಷಾರ ಮಾಸಪತ್ರಿಕೆಯಲ್ಲಿ ಟೆಕ್ಕಿರಣ ಎಂಬ ಹೆಸರಿನ ಅಂಕಣ ಪ್ರಾರಂಭವಾಗಿದೆ. ಇದು ಅದರ ಎರಡನೆಯ ಕಂತು ಭಾರತದಲ್ಲಿ ಡಯಾಬಿಟೀಸ್ ಅರ್ಥಾತ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆಯ ಪ್ರಮಾಣ ಹೆಚ್ಚುತ್ತಲೇ ಇದೆ. ನಗರ ಪ್ರದೇಶದಲ್ಲಿ ಸುಮಾರು 10 ರಿಂದ 14 ಶೇಕಡ ಜನರಿಗೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸುಮಾರು 3 ರಿಂದ 8 ಶೇಕಡ ಜನರಿಗೆ ಸಕ್ಕರೆ ಕಾಯಿಲೆ ಇದೆ ಎಂದು ಒಂದು ಸಮೀಕ್ಷೆ ತಿಳಿಸುತ್ತದೆ. ಸಕ್ಕರೆ ಕಾಯಿಲೆ ಇರುವವರ […]