Gadget Loka

All about gadgtes in Kannada

Month: December 2018

ಧ್ಯುತಿರಂಧ್ರ (ಅಪೆರ್ಚರ್ – aperture)

ಧ್ಯುತಿರಂಧ್ರ (ಅಪೆರ್ಚರ್ – aperture) ಕ್ಯಾಮರಾದ ಲೆನ್ಸ್ ಅನ್ನು ಸಾಮಾನ್ಯವಾಗಿ ಸಂಪೂರ್ಣವಾಗಿ ತೆರೆಯಲಾಗುವುದಿಲ್ಲ. ಬೆಳಕಿನ ಪ್ರಖರತೆಯನ್ನು ಅವಲಂಬಿಸಿ ಹೆಚ್ಚು ಯಾ ಕಡಿಮೆ ಮಾಡಲಾಗುತ್ತದೆ. ಇದನ್ನೇ ಅಪೆರ್ಚರ್ ಎನ್ನುತ್ತಾರೆ. ಈ ತೆರೆಯುವಿಕೆ ಅರ್ಥಾತ್ ವ್ಯಾಸವನ್ನು ಮಸೂರದ ನಾಭಿದೂರಕ್ಕೆ (focal length) ಅನುಪಾತ ಮೂಲಕ ಬರೆಯಲಾಗುತ್ತದೆ. ಉದಾ – f/2.8, f/5.6, f/18, ಇತ್ಯಾದಿ. ಮಸೂರದ ನಾಭಿದೂರ 50ಮಿ.ಮೀ. ಇದೆ ಮತ್ತು ಅಪೆರ್ಚರ್ ಸಂಖ್ಯೆ f/5.6 ಎಂದಾದಲ್ಲಿ ಮಸೂರದ ತೆರೆಯುವಿಕೆಯ ವ್ಯಾಸ ಸುಮಾರು 9ಮಿ.ಮೀ. ಎಂದು ಲೆಕ್ಕ ಹಾಕಬಹುದು. ಜಾಸ್ತಿ […]

ಕವಾಟವೇಗ (ಶಟ್ಟರ್ ಸ್ಪೀಡ್ – shutter speed)

ಕವಾಟವೇಗ (ಶಟ್ಟರ್ ಸ್ಪೀಡ್ – shutter speed) – ಫೋಟೋ ತೆಗೆಯಬೇಕಾದರೆ ಮಸೂರ ಮತ್ತು ಚಿತ್ರೀಕರಣದ ಪರದೆ ನಡುವೆ ಇರುವ ಕವಾಟವನ್ನು (ಶಟ್ಟರ್) ಸ್ವಲ್ಪ ಸಮಯದ ಕಾಲ ತೆರೆದು ಮತ್ತೆ ಮುಚ್ಚಬೇಕಾಗುತ್ತದೆ. ಈ ಕವಾಟ ತೆರೆದು ಮುಚ್ಚುವ ಸಮಯವನ್ನು ಶಟ್ಟರ್ ಸ್ಪೀಡ್ ಎನ್ನುತ್ತಾರೆ. ಸಾಮಾನ್ಯವಾಗಿ ಇವನ್ನು ಸೆಕೆಂಡಿನ ಎಷ್ಟನೇ ಪಾಲು ಎಂದು ನಮೂದಿಸುತ್ತಾರೆ. ಉದಾಹರಣೆಗೆ 1/125 ಎಂದರೆ ಒಂದು ಸೆಕೆಂಡಿನ 125ನೆ ಒಂದರಷ್ಟು ಕಾಲದಲ್ಲಿ ಶಟ್ಟರ್ ತೆರೆದು ಮುಚ್ಚಲಾಗುತ್ತದೆ ಎಂದು ಅರ್ಥ. ಹಾರುವ ಹಕ್ಕಿ ಅಥವಾ ಆಟದಂತಹ […]

ಅತಿ ಸಮೀಪ ಸಂವಹನ (NFC)

ಅತಿ ಸಮೀಪ ಸಂವಹನ (Near Field Communication, NFC) ಅಥವಾ ಸಮೀಪ ಕ್ಷೇತ್ರ ಸಂವಹನ ಎಂದರೆ ತುಂಬ ಸಮೀಪದಲ್ಲಿರುವ ಎರಡು ಸಾಧನಗಳ ನಡುವೆ ನಿಸ್ತಂತು (wireless) ಸಂವಹನವನ್ನು ಸಾಧ್ಯವಾಗಿಸುವ ತಂತ್ರಜ್ಞಾನ. ಇತ್ತೀಚೆಗೆ ಮಾರುಕಟ್ಟೆಗೆ ಬರುತ್ತಿರುವ ಹಲವು ಸ್ಮಾರ್ಟ್‌ಫೋನ್‌ಗಳಲ್ಲಿ ಈ ಸೌಲಭ್ಯವಿದೆ. ಇದನ್ನು ಬಳಸಿ ಸ್ಪೀಕರ್ ಜೋಡಣೆ, ಫೋನ್‌ಗಳ ನಡುವೆ ಸಂಪರ್ಕ ಸಾಧಿಸುವುದು, ಅಂಗಡಿಗಳಲ್ಲಿ ಹಣ ವರ್ಗಾವಣೆ ಎಲ್ಲ ಸಾಧ್ಯ.

ಸ್ಮಾರ್ಟ್‌ಫೋನ್

ಸ್ಮಾರ್ಟ್‌ಫೋನ್ (smartphone) ಅರ್ಥಾತ್ ಚತುರವಾಣಿ ಎಂದರೆ ಮೊಬೈಲ್ ಫೋನಿನ ಕೆಲಸಗಳನ್ನೂ ಮಾಡಬಲ್ಲ ಕಿಸೆಗಣಕ. ಈ ಫೋನುಗಳಲ್ಲಿ ಅಂತರಜಾಲ ನೋಡುವುದು, ಇಮೈಲ್ ಮಾಡುವುದು, ಪದಸಂಸ್ಕರಣೆ, ಜಿಪಿಎಸ್ ಬಳಸಿ ತಾನು ಇರುವ ಸ್ಥಾನ ತಿಳಿಯುವುದು, ಇನ್ನೂ ಏನೇನೋ ಮಾಡಬಹುದು. ಇತ್ತೀಚೆಗೆ ಇಂತಹ ಫೋನುಗಳು ಅಗ್ಗವಾಗುತ್ತ ಜನಸಾಮಾನ್ಯರ ಕೈಗೆಟುಕುವಂತಾಗುತ್ತಿವೆ. ಇಂತಹ ಫೋನುಗಳಿಗೆ ಸಹಸ್ರಾರು ತಂತ್ರಾಂಶಗಳು ಅಂತರಜಾಲದಲ್ಲಿ ಲಭ್ಯವಿವೆ. ಇವುಗಳು ಕೆಲಸ ಮಾಡಲು ಆಂಡ್ರೋಯಿಡ್, ವಿಂಡೋಸ್ ಫೋನ್, ಐಓಎಸ್, ಇತ್ಯಾದಿ ಯಾವುದಾದರೊಂದು ಕಾರ್ಯಾಚರಣೆಯ ವ್ಯವಸ್ಥೆ ಅಗತ್ಯ. ಯಾಕೋ ಏನೋ ಸಿಂಬಿಯನ್ ಫೋನ್‌ಗಳು ಸ್ಮಾರ್ಟ್‌ಫೋನ್ […]

ರಿಯಲ್‌ಮಿ ಸಿ1

ಕಡಿಮೆ ಬೆಲೆಗೆ ಉತ್ತಮ ಫೋನ್ ಒಪ್ಪೊ ಕಂಪೆನಿಯ ಸಬ್-ಬ್ರ್ಯಾಂಡ್ ಆಗಿ ಬಂದ ರಿಯಲ್‌ಮಿ ಈಗ ಸ್ವಂತ ಕಂಪೆನಿಯಾಗಿದೆ. ರಿಯಲ್‌ಮಿಯವರು ಅತಿ ಕಡಿಮೆ ಹಣಕ್ಕೆ ಉತ್ತಮ ಗುಣವೈಶಿಷ್ಟ್ಯಗಳ ಫೋನ್ ತಯಾರಿಸಿ ಶಿಯೋಮಿಯವರ ಜೊತೆ ನೇರ ಸ್ಪರ್ಧೆಗೆ ಇಳಿದಿದ್ದಾರೆ. ರಿಯಲ್‌ಮಿ1 ಮತ್ತು ರಿಯಲ್‌ಮಿ 2 ಪ್ರೊ ಎಂಬ ಎರಡು ಫೋನ್‌ಗಳ ವಿಮರ್ಶೆಯನ್ನು ಗ್ಯಾಜೆಟ್‌ಲೋಕ ಅಂಕಣದಲ್ಲಿ ಈ ಹಿಂದೆ ನೀಡಲಾಗಿತ್ತು. ನೀಡುವ ಹಣಕ್ಕೆ ನಿಜಕ್ಕೂ ಉತ್ತಮ ಉತ್ಪನ್ನಗಳು ಎಂದು ಅವುಗಳ ಬಗ್ಗೆ ಬರೆಯಲಾಗಿತ್ತು. ಈ ಸಲ ವಿಮರ್ಶೆ ಮಾಡುತ್ತಿರುವುದು ರಿಯಲ್‌ಮಿ ಸಿ1 […]

ಏಸುಸ್ ಝೆನ್‌ಫೋನ್ ಮ್ಯಾಕ್ಸ್ ಎಂ1

ದೊಡ್ಡ ಬ್ಯಾಟರಿ, ಚಿಕ್ಕ ಗಾತ್ರ ಹಾಗೂ ಕಡಿಮೆ ತೂಕ   ತೈವಾನ್ ದೇಶದ ಏಸುಸ್ ಕಂಪೆನಿ ಭಾರತದ ಗಣಕ, ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಒಂದು ಗಮನಾರ್ಹ ಹೆಸರು. ಈ ಕಂಪೆನಿಯ ಹಲವು ಉತ್ಪನ್ನಗಳನ್ನು ಇದೇ ಅಂಕಣದಲ್ಲಿ ವಿಮರ್ಶಿಸಲಾಗಿತ್ತು. ಏಸುಸ್ ಇತ್ತೀಚೆಗೆ ಕೆಲವು ಆಯ್ದ ಕ್ಷೇತ್ರಗಳಲ್ಲಿ ಈಗಾಗಲೇ ಸ್ಥಾಪಿತರಾದವರನ್ನು ಗುರಿಯಾಗಿಟ್ಟುಕೊಂಡು ಫೋನ್‌ಗಳನ್ನು ಮಾರುಕಟ್ಟೆಗೆ ಬಿಡಲು ಪ್ರಾರಂಭಿಸಿದೆ. ಮೇಲ್ದರ್ಜೆಯ ಫೋನ್‌ಗಳಲ್ಲಿ ವನ್‌ಪ್ಲಸ್‌ಗೆ ಪ್ರತಿಸ್ಪರ್ಧಿಯಾಗಿ ಙೆನ್‌ಫೋನ್ ೫ ಝಡ್ ಅನ್ನು ತಯಾರಿಸಿದೆ. ಕಡಿಮೆ ಬೆಲೆಯ ಫೋನ್‌ಗಳಲ್ಲಿ ಶಿಯೋಮಿಗೆ ಪ್ರತಿಸ್ಪರ್ಧಿಯಾಗಲು […]

ರಿಯಲ್‌ಮಿ 2 ಪ್ರೊ

ಮಧ್ಯಮ ಬೆಲೆಗೆ ಅತ್ಯುತ್ತಮ ಫೋನ್ ರಿಯಲ್‌ಮಿ ಎಂಬುದು ಒಪ್ಪೊ ಕಂಪೆನಿಯದೇ ಸಬ್‌ಬ್ರ್ಯಾಂಡ್. ಸ್ವಲ್ಪ ಜಾಸ್ತಿ ಬೆಲೆಯ ಫೋನ್‌ಗಳನ್ನು ಒಪ್ಪೊ ಹೆಸರಿನಲ್ಲಿ ಮಾರಾಟ ಮಾಡುತ್ತಿದೆ. ₹ 20 ಸಾವಿರಕ್ಕಿಂತ ಕಡಿಮೆ ಬೆಲೆಯ ಫೋನ್‌ಗಳನ್ನು ರಿಯಲ್‌ಮಿ ಹೆಸರಿನಲ್ಲಿ ಮಾರಾಟ ಮಾಡುತ್ತಿದೆ. ಇತ್ತೀಚೆಗೆ ಹಲವು ಕಂಪೆನಿಗಳು ಇದೇ ರೀತಿ ಎರಡು ಹೆಸರಿನಲ್ಲಿ ಫೋನ್‌ಗಳನ್ನು ಮಾರಾಟ ಮಾಡುತ್ತಿವೆ. ಉದಾಹರಣೆಗೆ ಹುವಾವೇ ಮತ್ತು ಹೋನರ್. ಒಪ್ಪೊ ಮತ್ತು ರಿಯಲ್‌ಮಿ ಈ ಸಾಲಿಗೆ ಹೊಸದಾಗಿ ಸೇರ್ಪಡೆಯಾಗಿವೆ. ರಿಯಲ್‌ಮಿ 1 ಫೊನಿನ ವಿಮರ್ಶೆಯನ್ನು ಇದೇ ಅಂಕಣದಲ್ಲಿ ಮಾಡಲಾಗಿತ್ತು. […]

ಹುವಾವೇ ನೋವಾ 3

ಉತ್ತಮ ವಿನ್ಯಾಸ ಮತ್ತು ಕ್ಯಾಮರ ಇರುವ ಫೋನ್ ಇಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಪ್ರಸಿದ್ಧ ಹೆಸರು ಹುವಾವೇ (Huawei). ಹುವಾವೇಯವರದೇ ಇನ್ನೊಂದು ಬ್ರ್ಯಾಂಡ್ ಹೋನರ್ (ಆನರ್?). ಈ ಕಂಪೆನಿಯ ಕೆಲವು ಸ್ಮಾರ್ಟ್‌ಫೋನ್‌ಗಳ ವಿಮರ್ಶೆಯನ್ನು ಗ್ಯಾಜೆಟ್‌ಲೋಕ ಅಂಕಣದಲ್ಲಿ ನೀಡಲಾಗಿತ್ತು. ಹುವಾವೇ ಕಂಪೆನಿಯು ಸ್ವಲ್ಪ ಮೇಲ್ದರ್ಜೆಯ ಫೋನ್‌ಗಳನ್ನು ತಯಾರಿಸುತ್ತಿದೆ. ಇತ್ತೀಚೆಗಷ್ಟೆ ಅವರು ಭಾರತದಲ್ಲೂ ತಮ್ಮ ಫೋನ್‌ಗಳನ್ನು ಮಾರಾಟ ಮಾಡಲು ಪ್ರಾರಂಬಿಸಿದ್ದಾರೆ. ಈ ಸಲ ನಾವು ವಿಮರ್ಶಿಸುತ್ತಿರುವ ಗ್ಯಾಜೆಟ್ ಹುವಾವೇ ನೋವಾ 3 (Huawei Nova 3) ಗುಣವೈಶಿಷ್ಟ್ಯಗಳು ಪ್ರೋಸೆಸರ್ 4 x 2.36 […]

Gadget Loka © 2018