ಅಂತರಜಾಲದ ಬಲಿ ರಷ್ಯಾ ದೇಶವು ಉಕ್ರೇನ್ (ಯುಕ್ರೇನ್) ದೇಶದ ಮೇಲೆ ಯುದ್ಧ ಘೋಷಣೆ ಮಾಡಿ ಧಾಳಿ ಪ್ರಾರಂಭ ಮಾಡಿರುವುದು ಈಗಾಗಲೇ ದೊಡ್ಡ ಸುದ್ದಿಯಾಗಿದೆ. ಉಕ್ರೇನ್‌ನ ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಇವುಗಳನ್ನು ರಷ್ಯಾವು ಹಲವು ಕಡೆ ಕತ್ತರಿಸಿದೆ. ಇವುಗಳ ಜೊತೆಗೆ ಅಲ್ಲಿಯ ಅಂತರಜಾಲ ಸಂಪರ್ಕಕ್ಕೂ ಅದು ಕತ್ತರಿ ಪ್ರಯೋಗ ಮಾಡಿದೆ. ವಿದ್ಯುತ್ ಸಂಪರ್ಕ ಮತ್ತು ರಸ್ತೆಗಳನ್ನು ಬಾಂಬ್ ದಾಳಿಯ ಮೂಲಕ ಕೆಡಿಸಬಹುದು. ಆದರೆ ಅಂತರಜಾಲ ಸಂಪರ್ಕವನ್ನು ಹೇಗೆ ಕೆಡಿಸುವುದು? ಕೇಬಲ್ ಜಾಲ ಮತ್ತು ಕಟ್ಟಡವನ್ನು ಹಾಳು ಮಾಡಿದರೆ […]