ಮನೆಯೊಳಗೆ ಮನೆಯೊಡೆಯನಿಲ್ಲ ಎಂಬ ಸಾಲು ಕೇಳಿರಬಹುದು. ಮನೆಯ ಯಜಮಾನ ಎಲ್ಲಿಗೋ ಹೋಗಿ ಕಸ ಗುಡಿಸದೆ ಮನೆಯೆಲ್ಲ ಗಲೀಜಾದಾಗ ಈ ಸಾಲಿನ ಬಳಕೆಯಾಗುತ್ತದೆ. ಈಗಿನ ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಮನೆಯೊಳಗಡೆ ಮನೆಯೊಡೆಯನಿಲ್ಲದಿದ್ದರೂ ಮನೆಯನ್ನು ಸದಾ ಸ್ವಚ್ಛವಾಗಿಟ್ಟು, ರಾತ್ರಿ ದೀಪ ಹಚ್ಚಿ, ಹಗಲು ದೀಪ ಆರಿಸಿ, ಮನೆಯೊಳಗೆ ಮನೆಯೊಡೆಯನಿದ್ದಾನೆ ಎಂಬ ಭಾವನೆ ಮೂಡುವಂತೆ ಮಾಡಬಲ್ಲ ಚತುರ ಮನೆಗಳಿವೆ. ಇವುಗಳನ್ನು ಇಂಗ್ಲಿಷಿನಲ್ಲಿ smart home ಎನ್ನುತ್ತಾರೆ. ಚತುರ ಮನೆ ಅಂದರೆ ಏನು? ಬನ್ನಿ ಈ ಸಂಚಿಕೆಯಲ್ಲಿ ಅದನ್ನು ತಿಳಿದುಕೊಳ್ಳೋಣ. ಚತುರ ಮನೆ […]
Tag: ಕೃತಕ ಬುದ್ಧಿಮತ್ತೆ
ಕೃತಕ ಬುದ್ಧಿಮತ್ತೆಯ ಕಾಲ
2022ರಲ್ಲಿ ಹಾಗೂ 2023ರಲ್ಲಿ ಅತ್ಯಂತ ಸುದ್ಧಿಯಲ್ಲಿರುವ ತಂತ್ರಜ್ಞಾನ ಕೃತಕ ಬುದ್ಧಿಮತ್ತೆ. ಕೃತಕ ಬುದ್ಧಿಮತ್ತೆ (artificial intelligence) ಎನ್ನುವುದು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಇತ್ತೀಚೆಗೆ ತುಂಬ ಸುದ್ದಿ ಮಾಡುತ್ತಿರುವ ವಿಷಯ. ಇದರಲ್ಲಿ ಯಂತ್ರಗಳು ಅಥವಾ ತಂತ್ರಾಂಶಗಳು ತಾವೇ ವಿಷಯಗಳನ್ನು ಅರ್ಥಮಾಡಿಕೊಂಡು, ಅವುಗಳಿಗೆ ಸ್ಪಂದಿಸಿ, ತಾವೇ ತೀರ್ಮಾನ ತೆಗೆದುಕೊಂಡು ಕೆಲಸ ಮಾಡುತ್ತವೆ. ಕೆಲವು ಪ್ರಮುಖ ಉದಾಹರಣೆಗೆಳು – ಯಂತ್ರಾನುವಾದ, ಪಠ್ಯದಿಂದ ಧ್ವನಿಗೆ ಹಾಗೂ ಧ್ವನಿಯಿಂದ ಪಠ್ಯಕ್ಕೆ ಪರಿವರ್ತನೆ, ಚಿತ್ರದಿಂದ ಪಠ್ಯಕ್ಕೆ, ಪಠ್ಯದ ಪ್ರಕಾರ ಕೃತಕವಾಗಿ ಚಿತ್ರಗಳ ರಚನೆ, ಚಿತ್ರಗಳನ್ನು ಅರ್ಥಮಾಡಿಕೊಳ್ಳುವುದು, […]