ಆನಂದ ಪಾಟೀಲ ಇಂಗ್ಲೆಂಡಿನಲ್ಲಿದ್ದಾರೆ. ಅವರ ತಾಯಿ ಬೆಂಗಳೂರಿನ ಅವರ ಮನೆಯಲ್ಲಿ ಒಬ್ಬರೇ ಇರುತ್ತಾರೆ. ಅವರಿಗೆ ವಯಸ್ಸಾಗಿದೆ. ಓಡಾಡಲು ಅಷ್ಟೇನೂ ತೊಂದರೆಯಿಲ್ಲ. ಆದರೂ ಇದ್ದಕ್ಕಿಂದ್ದಂತೆ ಬಿದ್ದರೆ? ಮನೆಯೊಳಗೆ ಯಾರಾದರೂ ನುಸುಳಿದರೆ? ಆನಂದ ಪಾಟೀಲ ಇದಕ್ಕೆಲ್ಲ ಪರಿಹಾರ ಕಂಡುಕೊಂಡಿದ್ದಾರೆ. ಅವರ ಮನೆಯಲ್ಲಿ ಸಿಸಿಟಿವಿ ಅಳವಡಿಸಿದ್ದಾರೆ. ಅವು ಮಾಮೂಲಿ ಸಿಸಿಟಿವಿ ಕ್ಯಾಮೆರಾಗಳಲ್ಲ. ಅವುಗಳು motion sensing ನಮೂನೆಯವು ಮತ್ತು ಅಂತರಜಾಲಕ್ಕೆ ಸಂಪರ್ಕಹೊಂದಿದವು. ಅಂದರೆ ಅವುಗಳ ವೀಕ್ಷಣೆಯ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ ನಡೆದಾಡಿದರೆ ಅವು ಪತ್ತೆ ಹಚ್ಚಿ ಅಂತರಜಾಲದ ಮೂಲಕ ಸಂಬಂಧಪಟ್ಟವರಿಗೆ ಎಚ್ಚರಿಸುತ್ತವೆ. […]