ಟಿಮ್ ಬರ್ನರ್ಸ್-ಲೀ ನೆಟ್‌ವರ್ಕ್ ಮಾರ್ಕೆಟಿಂಗ್ ಬಗ್ಗೆ ತಿಳಿಯೋಣ ಎಂದು ಅಂತರಜಾಲಕ್ಕೆ (ಇಂಟರ್‌ನೆಟ್‌ಗೆ) ಲಗ್ಗೆ ಇಡಿ. ಜಗತ್ಪ್ರಸಿದ್ಧ ತಾಣ-ಶೋಧಕ ಗೂಗ್ಲ್‌ನಲ್ಲಿ ನೆಟ್‌ವರ್ಕ್ ಮಾರ್ಕೆಟಿಂಗ್ ಎಂದು ಬೆರಳಚ್ಚಿಸಿ ಮೌಸ್ ಗುಂಡಿಯನ್ನು ಕ್ಲಿಕ್ ಮಾಡಿ. ಈಗ ನೋಡಿ. ನೆಟ್‌ವರ್ಕ್ ಮಾರ್ಕೆಟಿಂಗ್, ನೆಟ್‌ವರ್ಕ್, ಮಾರ್ಕೆಟಿಂಗ್, ಹೀಗೆ ಹಲವು ವಿಷಯಗಳ ತಾಣಗಳ ಸೂಚಿ ದೊರೆಯುತ್ತದೆ. ನೆಟ್‌ವರ್ಕ್ ಬಗ್ಗೆ ನೀಡಿರುವ ತಾಣದ ತಂತು (ಲಿಂಕ್) ಮೇಲೆ ಕ್ಲಿಕ್ ಮಾಡಿ ನೋಡಿ. ಅದು ನಿಮ್ಮನ್ನು ಗಣಕಗಳ ಜಾಲ (ನೆಟ್‌ವರ್ಕ್) ಬಗ್ಗೆ ವಿವರ ನೀಡುವ ತಾಣವಾಗಿರುತ್ತದೆ. ಅಲ್ಲಿರುವ ಇನ್ಯಾವುದಾದರೂ […]