ಕಡಿಮೆ ಬೆಲೆಗೆ ಉತ್ತಮ ಫೋನ್ ಒಪ್ಪೊ ಕಂಪೆನಿಯ ಸಬ್-ಬ್ರ್ಯಾಂಡ್ ಆಗಿ ಬಂದ ರಿಯಲ್‌ಮಿ ಈಗ ಸ್ವಂತ ಕಂಪೆನಿಯಾಗಿದೆ. ರಿಯಲ್‌ಮಿಯವರು ಅತಿ ಕಡಿಮೆ ಹಣಕ್ಕೆ ಉತ್ತಮ ಗುಣವೈಶಿಷ್ಟ್ಯಗಳ ಫೋನ್ ತಯಾರಿಸಿ ಶಿಯೋಮಿಯವರ ಜೊತೆ ನೇರ ಸ್ಪರ್ಧೆಗೆ ಇಳಿದಿದ್ದಾರೆ. ರಿಯಲ್‌ಮಿ1 ಮತ್ತು ರಿಯಲ್‌ಮಿ 2 ಪ್ರೊ ಎಂಬ ಎರಡು ಫೋನ್‌ಗಳ ವಿಮರ್ಶೆಯನ್ನು ಗ್ಯಾಜೆಟ್‌ಲೋಕ ಅಂಕಣದಲ್ಲಿ ಈ ಹಿಂದೆ ನೀಡಲಾಗಿತ್ತು. ನೀಡುವ ಹಣಕ್ಕೆ ನಿಜಕ್ಕೂ ಉತ್ತಮ ಉತ್ಪನ್ನಗಳು ಎಂದು ಅವುಗಳ ಬಗ್ಗೆ ಬರೆಯಲಾಗಿತ್ತು. ಈ ಸಲ ವಿಮರ್ಶೆ ಮಾಡುತ್ತಿರುವುದು ರಿಯಲ್‌ಮಿ ಸಿ1 […]