Gadget Loka

All about gadgtes in Kannada

Tag: technology

ರಷ್ಯಾ ಯುಕ್ರೇನ್ ಜಾಲಸಮರ

ಅಂತರಜಾಲದಲ್ಲಿ ಸೈಬರ್ ಯುದ್ಧ ದೇಶ ದೇಶಗಳ ನಡುವೆ ಯುದ್ಧ ನಡೆಯುವಾಗ ಅವುಗಳ ನಡುವಿನ ಯುದ್ಧ ಕೇವಲ ಮಿಲಿಟರಿಗೆ ಮಾತ್ರ ಸೀಮಿತವಾಗಿರಬೇಕಾಗಿಲ್ಲ. ಈಗಿನ ಕಾಲದಲ್ಲಿ ಯುದ್ಧ ಹಲವು ಮಜಲುಗಳಲ್ಲಿ ನಡೆಯುತ್ತದೆ. ಅವುಗಳಲ್ಲಿ ಆರ್ಥಿಕ, ನೀರು, ಜೈವಿಕ ಇತ್ಯಾದಿಗಳ ಜೊತೆ ಅಂತರಜಾಲವೂ ಸೇರಿದೆ. ರಷ್ಯಾದ ಸೈನ್ಯವು ಹೇಗೆ ಯು(ಉ)ಕ್ರೇನ್‌ನ ಪೂರ್ವಭಾಗದಲ್ಲಿ ಅಂತರಜಾಲ ಸಂಪರ್ಕವನ್ನು ಹೇಗೆ ಹಾಳುಗೆಡವಿತು ಎಂಬುದನ್ನು ಹಿಂದಿನ ಸಂಚಿಕೆಯಲ್ಲಿ ನೋಡಿದ್ದೆವು. ಈಗ ನಾವು ಜೀವಿಸುತ್ತಿರುವುದು ಡಿಜಿಟಲ್ ಅರ್ಥಾತ್ ತಂತ್ರಜ್ಞಾನ ಯುಗದಲ್ಲಿ. ಅಂದ ಮೇಲೆ ಯುದ್ಧವು ಈ ಕ್ಷೇತ್ರದಲ್ಲೂ ನಡೆಯಬೇಕಲ್ಲವೇ? […]

ಕನ್ನಡದ ಜಾಲತಾಣಕ್ಕೆ ಕನ್ನಡದಲ್ಲೇ ವಿಳಾಸ

ನೀವು ಯಾವುದೇ ಜಾಲತಾಣ ಅಂದರೆ ವೆಬ್‌ಸೈಟ್ ತೆರೆಯಬೇಕಾದರೆ ಏನು ಮಾಡುತ್ತೀರಿ? ಯಾವುದಾದರೊಂದು ಬ್ರೌಸರ್ (ಉದಾ -ಫಯರ್‌ಫಾಕ್ಸ್, ಕ್ರೋಮ್, ಎಡ್ಜ್) ತೆರೆದು ಅದರಲ್ಲಿ ಜಾಲತಾಣದ ವಿಳಾಸವನ್ನು ಟೈಪ್ ಮಾಡುತ್ತೀರಿ ತಾನೆ? ಒಂದೆರಡು ಜಾಲತಾಣಗಳ ವಿಳಾಸ ತಿಳಿಸಿ ನೋಡೋಣ. ನೀವು ಹೇಳಬಹುದಾದ ಉದಾಹರಣೆಗಳು –www.google.com, www.facebook.com, www.twitter.com… ಕನ್ನಡದ ಜಾಲತಾಣಗಳ ಉದಾಹರಣೆ ನೀಡಿ ಎಂದರೆ – www.vishvakannada.com, www.ejnana.com, hosadigantha.com ಇತ್ಯಾದಿ ನೀಡಬಹುದು. ಇಲ್ಲೊಂದು ವಿಷಯ ಗಮನಿಸಿದಿರಾ? ಕನ್ನಡ ಜಾಲತಾಣಗಳಿಗೂ ಅವುಗಳ ವಿಳಾಸ ಇಂಗ್ಲಿಶಿನಲ್ಲೇ ಇವೆ ಎಂದು. ಇದು ಯಾಕೆ […]

ಸಹಜ ಭಾಷಾ ಸಂಸ್ಕರಣ

ಡಿಜಿಟಲ್ ಲೋಕದಲ್ಲಿ ನಮ್ಮ ಭಾಷೆ “ನರೇಂದ್ರ ಮೋದಿಯವರು ವಾರಣಾಸಿಗೆ ಭೇಟಿ ನೀಡಿದರು” “ಇವತ್ತು ಮಳೆ ಬಂದಿದೆ” ದೈನಂದಿನ ಜನಜೀವನದಲ್ಲಿ ನಾವು ಪ್ರತಿನಿತ್ಯ ಇಂತಹ ಹಲವಾರು ವಾಕ್ಯಗಳನ್ನು ಓದುತ್ತಿರುತ್ತೇವೆ ಅಥವಾ ಕೇಳುತ್ತಿರುತ್ತೇವೆ. ಇದು ಮಾಹಿತಿಯುಗ. ಈ ಮಾಹಿತಿಯ ಪ್ರಮುಖ ಅಂಗ ಪಠ್ಯರೂಪದಲ್ಲಿದೆ ಅಂದರೆ ವಾಕ್ಯಗಳು. ವಾಕ್ಯಗಳು ಪದಗಳಿಂದಾಗಿವೆ. ಈ ವಾಕ್ಯಗಳನ್ನು ನಮ್ಮ ಮೆದುಳು ಸಹಜವಾಗಿಯೇ ಪದಗಳಾಗಿ ವಿಂಗಡಿಸಿ ಅವುಗಳ ಅರ್ಥವನ್ನು ವಿಶ್ಲೀಷಿಸುತ್ತದೆ. ಎಲ್ಲ ವಾಕ್ಯಗಳನ್ನು ಓದಿ ಇಡಿಯ ಲೇಖನದ ಒಟ್ಟು ಸಾರಾಂಶವನ್ನು ಮೆದುಳು ಗ್ರಹಿಸುತ್ತದೆ. ಈ ಪ್ರಕ್ರಿಯೆ ಮಾನವರಲ್ಲಿ […]

ಕಲಿಕಾರಂಜನೆ

ಶಿಕ್ಷಣದ ಜೊತೆ ಮನರಂಜನೆ ಸೇರಿದಾಗ ಮಾಧ್ಯಮಿಕ ಶಾಲೆಯ ಎಂಟನೆಯ ತರಗತಿ. ಖಗೋಳಶಾಸ್ತ್ರದ ಪಾಠ ನಡೆಯುತ್ತಿದೆ. ಅಧ್ಯಾಪಕರು ಸೌರವ್ಯೂಹದ ಬಗ್ಗೆ ಪಾಠ ಮಾಡುತ್ತಿದ್ದಾರೆ. ಪ್ಲೂಟೋ ಮತ್ತು ನೆಪ್ಚೂನ್‌ಗಳು ಸೂರ್ಯನ ಸುತ್ತುವ ಕಕ್ಷೆಗಳ ವೈಚಿತ್ರ್ಯವನ್ನು ವಿವರಿಸುತ್ತಿದ್ದಾರೆ. ೧೯೭೯ರಿಂದ ೧೯೯೯ರ ತನಕ ಪ್ಲೂಟೋವು ಭೂಮಿಗೆ ನೆಪ್ಚೂನ್‌ಗಿಂತ ಸಮೀಪವಾಗಿತ್ತು. ಈಗ ನೆಪ್ಚೂನ್ ಹತ್ತಿರ ಬಂದಿದೆ. ಇದಕ್ಕೆ ಕಾರಣವನ್ನು ವಿವರಿಸುತ್ತಿದ್ದಂತೆ ಚೂಟಿ ಹುಡುಗನೊಬ್ಬನಿಂದ ಪ್ರಶ್ನೆ ಬಂತು “ಹಾಗಾದರೆ ಅವುಗಳು ಒಂದಕ್ಕೊಂದು ಪರಸ್ಪರ ಢಿಕ್ಕಿ ಹೊಡೆಯುವುದಿಲ್ಲವೇ?”. ಅದು ಅಸಾಧ್ಯ ಎಂಬುದನ್ನು ವಿವರಿಸಲು ಅಧ್ಯಾಪಕರು ಶತಾಯಗತಾಯ ಪ್ರಯತ್ನಿಸಿದರು. […]

ಗೂಢನಾಣ್ಯಗಳ ನಿಗೂಢ ಜಗತ್ತು

ಕ್ರಿಪ್ಟೊಕರೆನ್ಸಿಗಳ ಕಿರು ಪರಿಚಯ “ಬಿಟ್ ಕಾಯಿನ್ ಹಗರಣದ ಆರೋಪಿ 5000 ಬಿಟ್ ಕಾಯಿನ್ ದೋಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ  ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ  ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಕದ್ದ ಆ ಬಿಟ್ ಕಾಯಿನ್ ಎಲ್ಲಿದೆ? ಅದನ್ನು ಜಪ್ತಿ ಮಾಡಲಾಗಿದೆಯೇ? ಇಲ್ಲವೇ ಅವು ಇನ್ನೂ ಪತ್ತೆಯಾಗಿಲ್ಲವೇ?”          -ಇವು ಕರ್ನಾಟಕದ ಖ್ಯಾತ ರಾಜಕಾರಣಿಯೊಬ್ಬರ ಹೇಳಿಕೆ. ಇದನ್ನು ಇಲ್ಲಿ ನೆನಪಿಸಿಕೊಳ್ಳಲು ಕಾರಣವಿದೆ. ಈ ಹೇಳಿಕೆಯನ್ನು ಓದಿದರೆ ಈ ಬಿಟ್‌ಕಾಯಿನ್ ಎಂಬುದು ಯಾವುದೋ ಒಂದು ಹೊಸ ನಮೂನೆಯ ನಾಣ್ಯ, ಅದನ್ನು […]

ಬೆವರಿನಿಂದ ವಿದ್ಯುತ್

ಬೆವರಿಳಿಸಿ ಕೆಲಸ ಮಾಡಿದರೆ ದೊರೆಯುವುದು ವಿದ್ಯುತ್! ಬೆವರಿಳಿಸಿ ಕೆಲಸ ಮಾಡಿದರೆ ಶ್ರಮಕ್ಕೆ ತಕ್ಕ ಫ್ರತಿಫಲ ದೊರೆಯುವುದು ಎಂಬುದು ನಮ್ಮ ನಂಬಿಕೆ ಮಾತ್ರವಲ್ಲ ವಾಸ್ತವ ಕೂಡ. ಬೆವರಿಳಿಯಬೇಕಾದರೆ ಅತಿಯಾದ ಸೆಕೆಯಿರಬೇಕು ಅಥವಾ ಶಕ್ತಿ ವ್ಯಯಿಸಿ ಕೆಲಸ ಮಾಡಬೇಕು. ಶಕ್ತಿಯಲ್ಲಿ ಹಲವು ನಮೂನೆಗಳಿವೆ. ಉಷ್ಣ, ಬೆಳಕು, ವಿದ್ಯುತ್, ಇವು ನಮಗೆ ಸಾಮಾನ್ಯವಾಗಿ ಪರಿಚಿತವಿರುವ ಶಕ್ತಿಯ ನಮೂನೆಗಳು. ಶಕ್ತಿ ಹಾಕಿ ಕೆಲಸ ಮಾಡಿದರೆ ಬೆವರಿಳಿಯುತ್ತದೆ. ಈಗ ಈ ಬೆವರಿನಿಂದಲೇ ಶಕ್ತಿಯನ್ನು ಪಡೆಯುವ ವಿಧಾನವನ್ನು ವಿಜ್ಞಾನಿಗಳು ಆವಿಷ್ಕರಿಸಿದ್ದಾರೆ. ಅವರು ಹಾಗೆ ಆವಿಷ್ಕರಿಸಿರುವುದು ಶಕ್ತಿಯ […]

ಇದು ಮಾಹಿತಿ ಯುಗ

ಮಾಹಿತಿ ಕಳ್ಳರಿದ್ದಾರೆ, ಎಚ್ಚರಿಕೆ ನೀವು ಯಾವುದಾದರೂ ಸೂಪರ್ ಮಾರ್ಕೆಟ್ಟಿಗೆ ಹೋದಾಗ ಅಲ್ಲಿ ಒಂದು ಪೆಟ್ಟಿಗೆ ಇಟ್ಟು ಇದರಲ್ಲಿ ನಿಮ್ಮ ಹೆಸರು, ವಿಳಾಸ, ಫೋನ್ ಸಂಖ್ಯೆ ನೀಡಿ, ಅದರಲ್ಲಿ ಕೆಲವನ್ನು ಹೆಕ್ಕಿ ಗೆದ್ದವರಿಗೆ ವಿಶೇಷ ಬಹುಮಾನ ನೀಡುತ್ತೇವೆ ಎಂದು ಜಾಹೀರಾತು ನೀಡಿದ್ದನ್ನು ನಂಬಿ ನಿಮ್ಮ ಮಾಹಿತಿ ನೀಡಿದ್ದೀರಾ? ನಿಮಗೆ ಬಹುಮಾನ ಅಂತೂ ಬಂದಿರುವುದಿಲ್ಲ. ಆದರೆ ಅನಾವಶ್ಯಕ ಕಿರಿಕಿರಿ ಫೋನ್ ಕರೆಗಳು ಬರಲು ಪ್ರಾರಂಭವಾಗಿರುತ್ತದೆ. ಇವೆಲ್ಲ ಜನರ ವೈಯಕ್ತಿಕ ಮಾಹಿತಿ ಸಂಗ್ರಹಿಸುವ ಹಳೆಯ ವಿಧಾನಗಳಾದವು. ಈಗ ಎಲ್ಲವೂ ಆನ್‌ಲೈನ್. ನಿಮ್ಮ […]

ಚತುರ ಮನೆ

ಮನೆಯೊಳಗೆ ಮನೆಯೊಡೆಯನಿಲ್ಲ ಎಂಬ ಸಾಲು ಕೇಳಿರಬಹುದು. ಮನೆಯ ಯಜಮಾನ ಎಲ್ಲಿಗೋ ಹೋಗಿ ಕಸ ಗುಡಿಸದೆ ಮನೆಯೆಲ್ಲ ಗಲೀಜಾದಾಗ ಈ ಸಾಲಿನ ಬಳಕೆಯಾಗುತ್ತದೆ. ಈಗಿನ ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಮನೆಯೊಳಗಡೆ ಮನೆಯೊಡೆಯನಿಲ್ಲದಿದ್ದರೂ ಮನೆಯನ್ನು ಸದಾ ಸ್ವಚ್ಛವಾಗಿಟ್ಟು, ರಾತ್ರಿ ದೀಪ ಹಚ್ಚಿ, ಹಗಲು ದೀಪ ಆರಿಸಿ, ಮನೆಯೊಳಗೆ ಮನೆಯೊಡೆಯನಿದ್ದಾನೆ ಎಂಬ ಭಾವನೆ ಮೂಡುವಂತೆ ಮಾಡಬಲ್ಲ ಚತುರ ಮನೆಗಳಿವೆ. ಇವುಗಳನ್ನು ಇಂಗ್ಲಿಷಿನಲ್ಲಿ smart home ಎನ್ನುತ್ತಾರೆ. ಚತುರ ಮನೆ ಅಂದರೆ ಏನು? ಬನ್ನಿ ಈ ಸಂಚಿಕೆಯಲ್ಲಿ ಅದನ್ನು ತಿಳಿದುಕೊಳ್ಳೋಣ. ಚತುರ ಮನೆ […]

ಘನಸ್ಥಿತಿಯ ಬ್ಯಾಟರಿ

ಭಾರಿ ಬ್ಯಾಟರಿ ಬ್ಯಾಟರಿಗಳು ಎಲ್ಲ ವಿದ್ಯುತ್ ಚಾಲಿತ ಸಾಧನಗಳಿಗೂ ಬೇಕು. ಬ್ಯಾಟರಿಗಳಲ್ಲಿ ಹಲವಾರು ನಮೂನೆಗಳಿವೆ. ಬ್ಯಾಟರಿಯನ್ನು ಬ್ಯಾಟರಿ ಸೆಲ್ ಎನ್ನುವುದೇ ಸರಿಯಾದ ವೈಜ್ಞಾನಿಕ ವಿಧಾನ. ಬ್ಯಾಟರಿ ಸೆಲ್‌ಗಳ ಜೋಡಣೆಯೇ ಬ್ಯಾಟರಿ. ಆದರೆ ಬಳಕೆಯಲ್ಲಿ ಬ್ಯಾಟರಿ ಎಂದೇ ಬಂದುಬಿಟ್ಟಿದೆ. ಇರಲಿ. ಬ್ಯಾಟರಿಯ ಪ್ರಮುಖ ಅಂಗಗಳು ಮೂರು -ಋಣ ಮತ್ತು ಧನ ಇಲೆಕ್ಟ್ರೋಡ್‌ಗಳು ಮತ್ತು ಅವುಗಳ ಮಧ್ಯದಲ್ಲಿರುವ ದ್ರಾವಣ ಇಲೆಕ್ಟ್ರೋಲೈಟ್. ಲಿತಿಯಂ ಬ್ಯಾಟರಿಯಿರಲಿ, ಲೆಡ್ ಆಸಿಡ್ ಬ್ಯಾಟರಿಯಿರಲಿ, ಈ ಇಲೆಕ್ಟ್ರೋಲೈಟ್ ಸಾಮಾನ್ಯವಾಗಿ ದ್ರವವಾಗಿರುತ್ತದೆ. ನಿಮ್ಮ ಟಾರ್ಚ್‌ಗಳಲ್ಲಿ ಬಳಸುವ ಬ್ಯಾಟರಿ ಮಾತ್ರ […]

ಹಿರಿಯ ನಾಗರಿಕರಿಗೆ ತಂತ್ರಜ್ಞಾನದ ವರದಾನ

ಆನಂದ ಪಾಟೀಲ ಇಂಗ್ಲೆಂಡಿನಲ್ಲಿದ್ದಾರೆ. ಅವರ ತಾಯಿ ಬೆಂಗಳೂರಿನ ಅವರ ಮನೆಯಲ್ಲಿ ಒಬ್ಬರೇ ಇರುತ್ತಾರೆ. ಅವರಿಗೆ ವಯಸ್ಸಾಗಿದೆ. ಓಡಾಡಲು ಅಷ್ಟೇನೂ ತೊಂದರೆಯಿಲ್ಲ. ಆದರೂ ಇದ್ದಕ್ಕಿಂದ್ದಂತೆ ಬಿದ್ದರೆ? ಮನೆಯೊಳಗೆ ಯಾರಾದರೂ ನುಸುಳಿದರೆ? ಆನಂದ ಪಾಟೀಲ ಇದಕ್ಕೆಲ್ಲ ಪರಿಹಾರ ಕಂಡುಕೊಂಡಿದ್ದಾರೆ. ಅವರ ಮನೆಯಲ್ಲಿ ಸಿಸಿಟಿವಿ ಅಳವಡಿಸಿದ್ದಾರೆ. ಅವು ಮಾಮೂಲಿ ಸಿಸಿಟಿವಿ ಕ್ಯಾಮೆರಾಗಳಲ್ಲ. ಅವುಗಳು motion sensing ನಮೂನೆಯವು ಮತ್ತು ಅಂತರಜಾಲಕ್ಕೆ ಸಂಪರ್ಕಹೊಂದಿದವು. ಅಂದರೆ ಅವುಗಳ ವೀಕ್ಷಣೆಯ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ ನಡೆದಾಡಿದರೆ ಅವು ಪತ್ತೆ ಹಚ್ಚಿ ಅಂತರಜಾಲದ ಮೂಲಕ ಸಂಬಂಧಪಟ್ಟವರಿಗೆ ಎಚ್ಚರಿಸುತ್ತವೆ. […]

Gadget Loka © 2018